Latest

ಸ್ನೇಹಿತರಿಂದಲೇ ಮಾಡೆಲ್ ಮೇಲೆ ಗ್ಯಾಂಗ್ ರೇಪ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಾಡೆಲ್ ಮೇಲೆ ಸ್ನೇಹಿತ ಸೇರಿದಂತೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ಮುಂಬೈನಲ್ಲಿ ಬೆಳಕಿಗೆ ಬಂದಿದೆ.

ಅತ್ಯಾಚಾರಕ್ಕೊಳಗಾದ ಮಾಡೆಲ್ ಗುಜರಾತ್ ಮೂಲದವಳಾಗಿದ್ದು, ಕೆಲಸ ಹುಡುಕಲೆಂದು ಮುಂಬೈನ ತನ್ನ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದಳು. ಈ ವೇಳೆ ಸೋಷಿಯಲ್ ಮೀಡಿಯಾ ಮೂಲಕ ಯುವತಿಗೆ ಪುನೀತ್ ಶುಕ್ಲಾ ಎಂಬ ಯುವಕನ ಪರಿಚಯವಾಗಿದ್ದು, ಇಬ್ಬರೂ ಭೇಟಿಯಾಗಿದ್ದರು.

ಪುನೀತ್ ತನ್ನ ಸ್ನೇಹಿತರನ್ನು ಪರಿಚಯಿಸುವುದಾಗಿ ಹೇಳಿ ಬಹುಮಹಡಿ ಕಟ್ಟಡವೊಂದಕ್ಕೆ ಕರೆದೊಯ್ದಿದ್ದು, ಈ ವೇಳೆ ನಾಲ್ವರು ಮಾಡೆಲ್ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಕೃತ್ಯವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ಆರೋಪಿಗಳು ವಿಷಯ ಬಾಯ್ಬಿಟ್ಟರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡುವುದಾಗಿ ಮಾಡೆಲ್ ಗೆ ಬೆದರಿಕೆ ಹಾಕಿದ್ದಾರೆ.

ಈ ಕುರಿತು ಸಂತ್ರಸ್ತ ಮಾಡೆಲ್ ಪೊಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಆರೋಪಿ ಸ್ನೇಹಿತ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

Related Articles

Back to top button