Latest

ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿಯೇ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುಂಬೈನ ವಡಾಲದಲ್ಲಿ ಬೆಳಕಿಗೆ ಬಂದಿದೆ.

ಸ್ನೇಹಿತನನ್ನು ಭೇಟಿಯಾಗಲೆಂದು ಯುವತಿ ಮುಂಜಾನೆ ನಾಲ್ಕು ಗಂಟೆ ರೈಲಿನಲ್ಲಿ ಪನ್ಲ್ವೇಲ್ ಕಡೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಈ ಘಟನೆ ನಡೆದಿದೆ. ಮಹಿಳೆಯರ ಬೋಗಿಯಲ್ಲಿ ಯುವತಿ ಒಬ್ಬಳೇ ಇರುವುದನ್ನು ಗಮನಿಸಿದ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ್ದಾರೆ. ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಮುಂದಾಗಿದ್ದಾಳೆ. ಸಿಟ್ಟಿಗೆದ್ದ ಕಿಡಿಗೇಡಿಗಳು ಆಕೆಯನ್ನು ರೈಲಿನಿಂದ ಕೆಳಗೆ ತಳ್ಳಿದ್ದಾರೆ.

ರೈಲಿನಿಂದ ಕೆಳಗೆ ಬಿದ್ದ ಯುವತಿಯನ್ನು ಗ್ಯಾಂಗ್ ಮೆನ್ ಓರ್ವರು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button