Latest

ಭಾರಿ ಮಳೆಗೆ ಕುಸಿದ ಗೋಡೆ; 11ಕ್ಕೂ ಹೆಚ್ಚು ಜನರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಭಾರಿ ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ 11 ಜನರು ಸಾವನ್ನಪ್ಪಿರುವ ಘಟನೆ ಮುಂಬೈನ ಚಂಬೂರಿನ ಭಾರತ್ ನಗರ ಪ್ರದೇಶದಲ್ಲಿ ನಡೆದಿದೆ. ಗುಡಿಸಲುಗಳ ಮೇಲೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ

ಮುಂಬೈ ಪಾಲಿಕೆ ಸಿಬ್ಬಂದಿ ಹಾಗೂ ಎನ್ ಡಿ ಆರ್ ಎಫ್ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಹಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ.

Home add -Advt

16 ಜನರನ್ನು ರಕ್ಷಿಸಲಾಗಿದ್ದು, ಹಲವರು ಮಣ್ಣಿನಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಎನ್ ಡಿಆರ್ ಎಫ್ ತಂಡ ತಿಳಿಸಿದೆ. ಮುಂಬೈನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಗರದ ವಿವಿಧ ಭಾಗಗಳಲ್ಲಿ 5 ಮನೆಗಳು ಕುಸಿದು ಬಿದ್ದಿವೆ. ವಿಖ್ರೋಲಿ ಉಪನಗರದಲ್ಲಿ ಭೂ ಕುಸಿತದಿಂದಾಗಿ ಐದು ಜನರು ಸಾವನ್ನಪ್ಪಿದ್ದಾರೆ.

Related Articles

Back to top button