Kannada NewsLatestNational

*ಮಳೆ ಅವಾಂತರ: ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ: ಓರ್ವ ವಿದ್ಯಾರ್ಥಿ ಸಾವು; 10 ಮಕ್ಕಳ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ವಾಣಿಜ್ಯ ನಗರಿ ಮುಂಬೈನಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಶಾಲಾ ಬಸ್ ಮೇಲೆ ಮುರಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಶಾಲಾ ವಾಹನದ ಮೇಲೆ ಮರ ಬಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇನ್ನೋರ್ವ ಬಾಲಕ ಬಸ್‌ ಒಳಗೆ ಸಿಲುಕಿಕೊಂಡಿದ್ದಾನೆ. ಘಟನೆಯಲ್ಲಿ ಹತ್ತು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಸ್ ನಲ್ಲಿ ಸಿಲುಕಿರುವ ಬಾಲಕನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆಂಬೂರಿನ 11ನೇ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.


Home add -Advt

Related Articles

Back to top button