Latest

ಇನ್ಮುಂದೆ ಮುಂಬೈ ಕರ್ನಾಟಕ ‘ಕಿತ್ತೂರು ಕರ್ನಾಟಕ’ ಎಂದು ಮರುನಾಮಕರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂಬೈ ಕರ್ನಾಟಕ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುತ ಸಭೆಯಲ್ಲಿ ಈ ಕುರಿತು ಮಹವದ ನಿರ್ಧಾರ ಕೈಗೊಳ್ಳಲಾಗಿದ್ದು, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ, ಹಾವೇರಿ ಸೇರಿದಂತೆ 7 ಜಿಲ್ಲೆಗಳನ್ನು ಇನ್ಮುಂದೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ನೂತನ ಮರಳು ನೀತಿ ಜಾರಿಗೆ ಸಂಪುಟದಲ್ಲಿ ಒಪ್ಪಿಗೆ ದೊರೆತಿದ್ದು, ಒಂದು ಮೆಟ್ರಿಕ್ ಟನ್ ನದಿ ಮರಳಿಗೆ 700 ದರ ನಿಗದಿ ಪಡಿಸಲಾಗಿದೆ. ಮರಳು ಖರೀದಿಗೆ ಆನ್ ಲೈನ್ ನಲ್ಲಿಯೂ ಬೇಡಿಕೆ ಸಲ್ಲಿಸಬಹುದು.

ಧಾರವಾಡ ಹಾಲು ಒಕ್ಕೂಟ ವಿಂಗಡಿಸಿ ಹಾವೇರಿಗೆ ಪ್ರತ್ಯೇಕ ಹಾಲು ಒಕ್ಕೂಟ ರಚಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ವಿಂಗಡಣೆಗೆ ನಿರ್ಧರಿಸಲಾಗಿದೆ ಎಂದು ಹೇಳಿದರು.
ಬರಿಗಾಲಲ್ಲಿ ಬಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಹರೆಕಾಳ ಹಾಜಬ್ಬ; ಡಾ.ವಿಜಯ ಸಂಕೇಶ್ವರ ಸೇರಿ 119 ಜನರಿಗೆ ಪದ್ಮ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button