Kannada NewsKarnataka NewsLatest

*ಪೋಷಕರೆ ಎಚ್ಚರ…! ಮಕ್ಕಳಲ್ಲಿ ಹೆಚ್ಚುತ್ತಿದೆ ಮಂಗನ ಬಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮಂಗನ ಕಾಯಿಲೆ-ಕೆ ಎಫ್ ಡಿ ಭೀತಿ ನಡುವೆ ಮತ್ತೊಂದೆಡೆ ಹಲವು ಜಿಲ್ಲೆಗಳಲ್ಲಿ ಮಕ್ಕಳಲ್ಲಿ ಮಂಗನ ಬಾವು ಕಾಣಿಸಿಕೊಳ್ಳುತ್ತಿದೆ. ಮುಖದ ಕೆಳಬಾಗದಲ್ಲಿ ಕೆನ್ನೆಯ ಭಾಗದಲ್ಲಿ ಊದಿಕೊಳ್ಳುವುದು, ತೀವ್ರ ಜ್ವರದಿಂದ ಮಕ್ಕಳು ಬಳಲುತ್ತಿದ್ದಾರೆ. ಈ ಕಾಯಿಲೆ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿದೆ.

ಒಂದೇ ಶಾಲೆಯ 150ಕ್ಕೂ ಹೆಚ್ಚು ಮಕ್ಕಳಲ್ಲಿ ಮಂಗನ ಬಾವು ಪತ್ತೆಯಾಗಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಇಲ್ಲಿನ ಲಿಂಗಸಗೂರು ತಾಲೂಕಿನ ನೀರಲಕೇರಿ ಸರಕಾರಿ ಶಾಲೆಯ 150ಕ್ಕೂ ಹೆಚ್ಚು ಮಕ್ಕಳು ಮಂಗನ ಬಾವಿನಿಂದ ಬಳಲುತ್ತಿದ್ದಾರೆ.

ಮಕ್ಕಳನ್ನು ಆನೆಹೊಸೂರು, ಲಿಂಗಸಗೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದು, ಶಾಲೆಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಮಂಗನ ಬಾವು ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಒಬ್ಬರಲ್ಲಿ 3-4 ದಿನಗಳ ಕಾಲ ಬಾವು ಇರುತ್ತದೆ. ಆದರೆ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಜಾಗೃತಿ ವಹಿಸುವುದು ಮುಖ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.


Related Articles

Back to top button