Karnataka NewsLatest

*ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಪ್ರಮುಖ ಆರೋಪಿ ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಹಿಂದೆ ಮಹಿಳೆಯೊಬ್ಬರ ಕೈವಾಡವಿರುವುದು ಬೆಳಕಿಗೆ ಬಂದಿತ್ತು. ಇದೀಗ ಪ್ರಮುಖ ಆರೋಪಿ ಮಹಿಳೆ ಸೇರಿದಂತೆ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

Home add -Advt

ರೆಹಮತ್ ಅಲಿಯಾಸ್ ಆಯೀಷಾ, ಶೊಹೇಬ್ ಹಾಗೂ ಸಿರಾಜ್ ಬಂಧಿತ ಆರೋಪಿಗಳು. ಕಲ್ಲಡ್ಕ ಬಳಿ ಇಂದು ಬೆಳಿಗ್ಗೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಕೇರಳಕ್ಕೆ ಪರಾರಿಯಾಗಲು ಯತ್ನಿಸಿದ್ದ ವೇಳೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮೋಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಮಹಿಳೆಯೊಬ್ಬರ ಬ್ಲ್ಯಾಕ್ ಮೇಲ್ ಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರು ದಾಖಲಾಗಿತ್ತು. ಅ.6ರಂದು ನಾಪತ್ತೆಯಾಗಿದ್ದ ಮುಮ್ತಾಜ್ ಅಲಿ, ಅ.7ರಂದು ಕೂಳೂರು ಸೇತುವೆ ಬಳಿ ನದಿಯಲ್ಲಿ ಶವವಾಗಿ ಪತ್ತೆಯಾಗಿರು.

ಮುಮ್ತಾಜ್ ಅಲಿ ಆತ್ಮಹತ್ಯೆಗೆ ಮಹಿಳೆ ರೆಹಮತ್ ಅಲಿಯಾಸ್ ಆಯೀಷಾ ಹಾಗೂ ಗ್ಯಾಂಗ್ ಕಾರಣ ಎಂದು ಜನರ ವಿರುದ್ಧ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.


Related Articles

Back to top button