Kannada NewsKarnataka NewsLatest

ಮುನವಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ; ಕಾಂಗ್ರೆಸ್ ಗದ್ದಲ

ಪ್ರಗತಿವಾಹಿನಿ ಸುದ್ದಿ, ಮುನವಳ್ಳಿ – ಇಲ್ಲಿಯ ಪುರಸಭೆ ಅಧ್ಯಕ್ಷ, ಉಪ್ಧಾಯಕ್ಷರ ಆಯ್ಕೆಗೆ ಬುಧವಾರ ಚುನಾವಣೆ ನಡೆಯಿತು.

ಅಧ್ಯಕ್ಷರಾಗಿ ಬಿಜೆಪಿಯ ವಿಜಯ ಅಮಠೆ, ಉಪಾಧ್ಯಕ್ಷರಾಗಿ ಬಿಜೆಪಿಯ ರೇಣವ್ವ ಭಜಂತ್ರಿ ಆಯ್ಕೆಯಾದರು. ವಿಧಾನಸಭೆಯ ಉಪಾಧ್ಯಕ್ಷ, ಶಾಸಕ ಆನಂದ ಮಾಮನಿ ಪುರಸಭೆಗೆ ಆಗಮಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಶುಭ ಕೋರಿದರು. ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರಿ ನೀಡುವುದಾಗಿ ಅವರು ಭರವಸೆ ನೀಡಿದರು.

ಪೊಲೀಸರ ಆಗಮನ:  ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು ಗದ್ದಲ ಎಬ್ಬಿಸಿದರು. ಚುನಾವಣಾಧಿಕಾರಿಗಳು ನಿಸ್ಪಕ್ಷಪಾತವಾಗಿ ನಡೆದುಕೊಂಡಿಲ್ಲ. ಚುನಾವಣೆ ನ್ಯಾಯ ಸಮ್ಮತವಾಗಿ ನಡೆದಿಲ್ಲ ಎಂದು ಚುನಾವಣೆ ಬಹಿಷ್ಕರಿಸಿ, ಗದ್ದಲವೆಬ್ಬಿಸಿದರು. ಹಾಗಾಗಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಗಲಭೆಯನ್ನು ನಿಯಂತ್ರಿಸಿದರು.

 

Home add -Advt

 

Related Articles

Back to top button