
ಪ್ರಗತಿವಾಹಿನಿ ಸುದ್ದಿ: ಅಕ್ರಮಗಳನ್ನು ತಡೆಯದೇ ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ಪಿಎಸ್ ಐ ಓರ್ವರನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪಿಎಸ್ ಐ ಸುನೀಲ್ ಅಮಾನತುಗೊಂಡವರು. ಎಸ್ ಪಿ ರಾಮ್ ಅರಸಿದ್ದಿ ಪಿಎಸ್ ಐ ಸುನೀಲ್ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಮುನಿರಾಬಾದ್ ಠಾಣೆಯಲ್ಲಿ ಕೆಲ ಅನಧಿಕೃತ ಚಟುವಟಿಕೆಗಳು ನಡೆದಿದ್ದವು. ವಿದೇಶಿಗರ ಪಾರ್ಟಿ, ಅಕ್ರಮ ಕಲ್ಲು ಗಣಿಗಾರಿಕೆ, ಅನ್ನಭಾಗ್ಯ ಅಕ್ಕಿ ಮಾರಾಟ ಸೇರಿದಣ್ತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಅಕ್ರಮ ತಡೆಗಟ್ಟದೇ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಪಿಎಸ್ ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ.


