ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬೆಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಶಾಕ್ ಎದುರಾಗಿದೆ. ಮುನಿರತ್ನ ವಿರುದ್ಧ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ- ಎಸ್ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ.
ಎಸ್ಐಟಿ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಮುನಿರತ್ನ ವಿರುದ್ಧದ ಸಾಲು ಸಾಲು ಪ್ರಕರಣಗಳ ಬಗ್ಗೆ ಎಸ್ಐಟಿ ತನಿಖೆ ನಡೆಸಲಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಬಂಧನಕ್ಕಿಡಾಗಿ ಎರಡು ದಿನ ಜೈಲು ಸೇರಿದ್ದರು. ಇದೇ ವೇಳೆ ರಾಮನಗರದಲ್ಲಿ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್ ಮೇಲ್, ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಮತ್ತೆ ಅರೆಸ್ಟ್ ಆಗಿರುವ ಮುನಿರತ್ನಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ರಾಜ್ಯ ಸರ್ಕಾರ ಮುನಿರತ್ನ ವಿರುದ್ಧದ ಕೇಸ್ ಗಳ ತನಿಖೆಗೆ ಎಸ್ಐಟಿ ರಚನೆ ಮಾಡಿ ಆದೆಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ