Politics

*ಶಾಸಕ ಮುನಿರತ್ನ ವಿರುದ್ಧ 2 FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಿಸಲಾಗಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ ಸಂಬಂಧ ಹಾಗೂ ಮಾಜಿ ಕಾರ್ಪೊರೇಟರ್ ಓರ್ವರು ನೀಡಿದ ದೂರಿಗೆ ಸಂಬಂಧಿಸಿದಂತೆ ಮುನಿರತ್ನ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ.

Home add -Advt

ಗುತ್ತಿಗೆದಾರ ಚಲುವರಾಜು ಎಂಬುವವರು ಮುನಿರತ್ನ ವಿರುದ್ಧ ಜೀವ ಬೆದರಿಕೆ ಹಾಗೂ ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಇನ್ನು ಮಾಜಿ ಕಾರ್ಪೊರೇಟರ್ ವೇಲುನಾಯ್ಕರ್ ಎಂಬುವವರು ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲಿಸಲಾಗಿದೆ.

Related Articles

Back to top button