
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ನಡೆಸಿರುವ ಆರೋಪದಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಾಸಕ ಮುನಿರತ್ನ ಹಾಗೂ ಸಹಚರರು ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯ ಅಕ್ಕಮಹಾದೇವಿ ಸ್ಲಂನಲ್ಲಿ ನೆಲೆಸಿದ್ದ 50ಕ್ಕೂ ಹೆಚ್ಚು ಕಾರ್ಮಿಕರ ಕುಟುಂಬದವರ ಮನೆ ನೆಲಸಮ ಮಾಡಿದ್ದಾರೆ. ಇದರಿಂದ 70 ಸಾವಿರ ಹಣ, ಚಿನ್ನಾಭರಣಗಳು ಮಣ್ಣುಪಾಲಾಗಿವೆ ಎಂದು ತಿಂದರೆಗೊಳಗಾದವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ