Politics

*ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ.

ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆಯಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಕ್ಷಮ ಪ್ರಾಧಿಕಾರ ಗ್ರೀನ್ ಸಿಗ್ನಲ್ ನೀಡಿದೆ.

ಶಾಸಕ ಮುನಿರತ್ನ ವಿರುದ್ಧ 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ಲಂಚ ಸ್ವೀಕರಿಸಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ಸಿಕ್ಕಿದೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button