LatestPolitics

*ಕೇಸ್ ದಾಖಲಾಗುತ್ತಿದ್ದಂತೆ ನಾಪತ್ತೆಯಾದ ಬಿಜೆಪಿ ಶಾಸಕ*

ಪ್ರಗತಿವಾಹಿನಿ ಸುದ್ದಿ: ತನ್ನ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಬಿಜೆಪಿ ಶಾಸಕ ಮುನಿರತ್ನ ನಾಪತ್ತೆಯಾಗಿದ್ದು, ಪೊಲಿಸರು ಹುಡುಕಾಟ ನಡೆಸಿದ್ದಾರೆ.

Home add -Advt

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಮಾಜಿ ಕಾರ್ಪೊರೇಟರ್ ಗೆ ಅವಾಚ್ಯವಾಗಿ ಬೈದು, ಜಾತಿ ನಿಂದನೆ ಮಾಡಿದ ಆರೋಪದಡಿ ಮುನಿರತ್ನ ವಿರುದ್ಧ ಬೆಂಗಳೂರಿನ ವೈಯಾಲಿ ಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ಐಆರ್ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಬಂಧನ ಭೀತಿಯಲ್ಲಿರುವ ಶಾಸಕ ಮುನಿರತ್ನ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಇನ್ನೊಂದೆಡೆ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Related Articles

Back to top button