ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲಿಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಲ್ಲಿ ಕೇಸ್ ದಾಖಲಾಗಿದೆ.
ಡಿವೈಎಸ್ ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ