Politics

*ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು*

ಪ್ರಗತಿವಾಹಿನಿ ಸುದ್ದಿ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೆಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಮುನಿರತ್ನ ಹಾಗೂ ಅವರ ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. 2013ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದ ಬಗ್ಗೆ ಸಂತ್ರಸ್ತೆ ದೂರು ನೀಡಿದ್ದರು. ಶಾಸಕರ ಕಚೇರಿಯಲ್ಲಿಯೇ ಅತ್ಯಾಚಾರವೆಸಗಲಾಗಿತ್ತು. ಅಷ್ಟೇ ಅಲ್ಲದೇ ವೈರಸ್ ಇಂಜಕ್ಷನ್ ಚುಚ್ಚಿದ್ದರು. ಇದರಿಂದಾಗಿ ಇಡಿಆರ್ ಕಾಯಿಲೆ ಬಂದಿದೆ ಎಂದು ಸಂತ್ರಸ್ತೆ ದೂರು ನೀಡಿದ್ದರು.

ಅತ್ಯಾಚಾರ ನಡೆಸುದ್ದೂ ಅಲ್ಲದೇ ಮಹಿಳೆ ಮೇಲೆ ಅಮಾನುಷವಾಗಿ ನಡೆದುಕೊಂಡಿದ್ದಾರೆ ಎಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button