Kannada NewsKarnataka NewsLatestPolitics

*ಮಾಜಿ ಸಚಿವ ಮುನಿರತ್ನ ವಿರುದ್ಧ ಬೆಂಬಲಿಗರಿಂದಲೇ ಹನಿಟ್ರ್ಯಾಪ್ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಮುನಿರತ್ನ ವಿರುದ್ಧ ಬೆಂಬಲಿಗರೇ ಗಂಭೀರ ಆರೋಪ ಮಾಡಿದ್ದಾರೆ. ಮುನಿರತ್ನ ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದರು ಎಂದು ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕr ಆರೋಪಿಸಿದ್ದಾರೆ.

ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಈ ಮಧ್ಯೆ ಮಾಜಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ.

Home add -Advt

ಕರೆಯಿಸುವುದು, ಹನಿಟ್ರ್ಯಾಪ್ ಮಾಡಿಸುವುದು ಹೆದರಿಸುವುದು. ಇದಕ್ಕಾಗಿಯೇ ಜೆ.ಪಿ.ಪಾರ್ಕ್, ಡಾಲರ್ಸ್ ಕಾಲೋನಿಯಲ್ಲಿ ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸ್ತಾರೆ ಎಂದು ಹೇಳಿದ್ದಾರೆ.

ಮುನಿರತ್ನ ಅವರಿಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್ ಮನ್ ಕಲರ್ ಪಿಕ್ಚರ್ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ? ಎಂದು ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕರಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹಾಗಾಗಿ ಅವರು ಸಚಿವರಾದ ಮೇಲೂ ಬರಿ ಆಂಟಿಗಲೇ ಇರುತ್ತಿದ್ದರು ಎಂದು ಆರೋಪಿಸಿದ್ದಾರೆ.


Related Articles

Back to top button