Politics

*ಅತ್ಯಾಚಾರ ಪ್ರಕರಣ: ಮುನಿರತ್ನ ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಕಸ್ಟಡಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಎಸ್ ಐಟಿ ಅಧಿಕಾರಿಗಳು ಮತ್ತೆ ಕಸ್ಟಡಿಗೆ ಕೇಳಿಲ್ಲ.

ಈ ಹಿನ್ನೆಲೆಯಲ್ಲಿ ಕೋರ್ಟ್ ಮುನಿರತ್ನ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಅಕ್ಟೋಬರ್ 19ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button