
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ನಿಂದನೆ ಆರೋಪದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ದಾಖಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರುನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪಬ್ಲಿಕ್ ಸರ್ವೆಂಟ್ಸ್ ಆಗಿದ್ದವರು ಈ ರೀತಿ ನಡೆದುಕೊಂಡಿದ್ದಾರೆ ಎಂದು ದೂರು ದಾಖಲಾಗಿದೆ. ದೂರು ಆಧರಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ನಾವು ಯಾವುದೇ ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಇನ್ನೂ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಮಗೆ ಸೇಡಿನ ರಾಜಕಾರಣ ಮಾಡುವ ಅಗತ್ಯವಿಲ್ಲ ಜನ ನಮ್ಮನ್ನು ಬಹುಮತಗಳಿಂದ ಗೆಲ್ಲಿಸಿದ್ದಾರೆ. ಅದರಂತೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ