Politics

*ಶಾಸಕ ಮುನಿರತ್ನಗೆ ಶಾಕ್ ಮೇಲೆ ಶಾಕ್: ಬಿಜೆಪಿಯಿಂದ ಶೋಕಾಸ್ ನೋಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ನಿಂದನೆ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್.ಆರ್.ನಗರ ಶಾಸಕ ಮುನಿರತ್ನ ಅವರಿಗೆ ಬಿಜೆಪಿ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

Home add -Advt

ಬಿಜೆಪಿ ರಾಜ್ಯ ಶಿಸ್ತು ಸಮಿತಿಯಿಂದ ಮುನಿರತ್ನ ಅವರಿಗೆ ಶೊಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ನಿಂದನೆ ಆಡಿಯೋ ಪ್ರಕರಣದಿಂದಾಗಿ ಪಕ್ಷದ ಶಿಸ್ತಿಗೆ ಧಕ್ಕೆಯುಂಟಾಗಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಒಳಗಾಗಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿ ನೋಟೀಸ್ ನೀಡಲಾಗಿದೆ.

ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಅವಾಚ್ಯ ಶಬ್ಧಗಳಿಂದ ನಿಂದನೆ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಆರೋಪದಲ್ಲಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ವಯ್ಯಾಲಿಕಾವಲ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಾಗಿತ್ತು. ಅಲ್ಲದೇ ಗುತ್ತಿಗೆದಾರನ ಜೊತೆ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್ ಆಗಿತ್ತು. ಮಹಿಳೆಯರ ಬಗ್ಗೆಯೂ ಆಡಿಯೋದಲ್ಲಿ ಕೆಟ್ಟದಾಗಿ ಮಾತನಾಡಿರುವುದು ವೈರಲ್ ಆಗಿತ್ತು. ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಬಿಜೆಪಿ ಮುನಿರತ್ನಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

Related Articles

Back to top button