ಪ್ರಗತಿವಾಹಿನಿ ಸುದ್ದಿ, ಬೆಳಗಾವಿ- ಕರ್ನಾಟಕ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಭೂದಾಖಲೆಗಳ ಇಲಾಖೆಯ ಆಯುಕ್ತರಾದ ಮುನಿಷ್ ಮೌದ್ಗಿಲ್ ಅವರನ್ನು ವಿಶೇಷ ಅಧಿಕಾರಿಯನ್ನಾಗಿ ಚುನಾವಣಾ ಆಯೋಗ ನೇಮಿಸಿದೆ.
ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ ಮತ್ತು ಗೋಕಾಕ ಮತಕ್ಷೇತ್ರಗಳಲ್ಲಿ ಉಪ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಥವಾ ಯಾವುದೇ ರೀತಿಯ ಅಕ್ರಮಗಳು ಕಂಡು ಬಂದರೆ ವಿಷೇಷ ಅಧಿಕಾರಿಯಾಗಿರುವ ಮುನಿಷ್ ಮೌದ್ಗಿಲ್ (ಮೊಬೈಲ್ ಸಂಖ್ಯೆ- 9900009911) ಅವರಿಗೆ ಮಾಹಿತಿಯನ್ನು ನೀಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಕಾಗವಾಡಕ್ಕೆ ಹೊಸ ವೀಕ್ಷಕರು
ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಸಾಮಾನ್ಯ ವೀಕ್ಷಕರಾಗಿದ್ದ ಕೃಷ್ಣಕುಮಾರ್ ನಿರಾಳ ಅವರ ಬದಲಾಗಿ ಸುನೀಲಕರ್ ಧೋಲಿ ಅವರು ನೂತನ ಸಾಮಾನ್ಯ ವೀಕ್ಷಕರಾಗಿ ಆಗಮಿಸಿದ್ದಾರೆ.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೊಠಡಿ ಸಂಖ್ಯೆ ಎಸ್-೩ ಹಾಗೂ ಕಾಗವಾಡದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.
ನೂತನ ವೀಕ್ಷಕರಾದ ಸುನಿಲಕರ್ ಧೋಲಿ ಅವರನ್ನು ಮೊಬೈಲ್ ಸಂಖ್ಯೆ- 8277889383 ಮೂಲಕವು ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ