Latest

ಬಿಜೆಪಿ ಶಾಸಕ ಯತ್ನಾಳ್ ಗೆ ಹೈಕಮಾಂಡ್ ನೋಟೀಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಪಕ್ಷದ ಹೈಕಮಾಂಡ್ ಶೋಕಾಸ್ ನೋಟೀಸ್ ಜಾರಿ ಮಾಡಿದೆ.

ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪ ಹಾಗೂ ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿರುವ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿ ನೋಟೀಸ್ ನೀಡಿದ್ದು, 15 ದಿನಗಳ ಒಳಗೆ ಉತ್ತರ ನಿಡುವಂತೆ ಸೂಚಿಸಿದೆ.

Home add -Advt

ಯತ್ನಾಳ್ ಯಡಿಯೂರಪ್ಪ ವಿರುದ್ಧ ಸಿಡಿ ಬ್ಲ್ಯಾಕ್ ಮೇಲ್ ಹೇಳಿಕೆ ಹಾಗೂ ನಾನೇ ಮುಂದಿನ ಮುಖ್ಯಮಂತ್ರಿ ಎಂಬ ರೀತಿಯಲ್ಲಿ ಪರೋಕ್ಷ ಹೇಳಿಕೆಗಳನ್ನು ನೀಡಿದ್ದರು ಈ ಮೂಲಕ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು.

Related Articles

Back to top button