Kannada NewsKarnataka NewsNational
*ಕೊಲೆ ಮಾಡಿ ಮೃತ ದೇಹ ಸೂಟ್ ಕೇಸ್ ನಲ್ಲಿ ಸಾಗಾಟ: ಆರೋಪಿಗಳು ಅಂದರ್*

ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ಸೂಟ್ ಕೇಸ್ ನಲ್ಲಿ ತುಂಬಿಸಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಮುಂಬೈನಲ್ಲಿ ನಡೆದಿದೆ.
ಆರೋಪಿಗಳು ಸೂಟ್ ಕೇಸ್ ಸಮೇತ ಪೈಧೋನಿ ರೈಲು ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಲಗೇಜ್ ತಪಾಸಣೆ ಮಾಡಿದಾಗ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವುದು ಬಹಿರಂಗವಾಗಿದೆ ಎಂದು ರೈಲ್ವೇ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಗಳನ್ನು ಪ್ರವೀಣ್ ಚಾವ್ಯಾ ಮತ್ತು ಶಿವಜೀತ್ ಸುರೇಂದ್ರ ಸಿಂಗ್ ಎಂದು ಗುರುತಿಸಲಾಗಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.




