Belagavi NewsBelgaum NewsKannada NewsKarnataka News

*ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ*

ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಕೊಲೆ

ಖಾನಾಪುರ: ಮನೆಯ ಹಿಂದಿನ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ತಾಲೂಕಿನ ತೋಲಗಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

Home add -Advt

ಮೃತರನ್ನು ಅಮೀರ್ ಹುಸೇನ್ ಪಾಶ್ಚಾಪುರ (48) ಎಂದು ಗುರುತಿಸಲಾಗಿದ್ದು, ಇವ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಅದೇ ಗ್ರಾಮದ ಅಶೋಕ ರಾಮಾ ಉಗರಖೋಡ (28) ಎಂಬಾತನನ್ನು ನಂದಗಡ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮನೆಯ ಹಿಂಭಾಗದ ಚರಂಡಿ ಮೂಲಕ ನೀರು ಹರಿಸುವ ವಿಚಾರವಾಗಿ ಇಬ್ಬರ ನಡುವೆ ಕಳೆದ ಕೆಲವು ದಿನಗಳಿಂದ ಭಿನ್ನಾಭಿಪ್ರಾಯವಿತ್ತು. ಮಂಗಳವಾರ ಬೆಳಿಗ್ಗೆ ಇದೇ ವಿಷಯಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದ ಘಟನೆ ಕೊಲೆಯಲ್ಲಿ ಅಂತ್ಯಗೊಂಡಿದೆ.ಇಬ್ಬರ ನಡುವೆ ನಡೆಯುತ್ತಿದ್ದ ಜಗಳದ ವೇಳೆ ಆರೋಪಿ ಅಶೋಕ ಕೈಗೆ ಸಿಕ್ಕ ಪಿಕಾಸಿಯಿಂದ ಹಲ್ಲೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ‌. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button