Kannada NewsKarnataka NewsNationalPolitics

*ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಮರ್ಡರ್: ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ ಎಂಬಲ್ಲಿ ಮರಳು ಅನ್ಲೋಡ್ ಮಾಡುತ್ತಿದ್ದ ಪಿಕಪ್ ಚಾಲಕ ಕೊಳತ್ತಮಜಲು ನಿವಾಸಿ ರಹೀಂ ಎಂಬಾತನನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಸೋಇಚ್ಛೆ ಹಲ್ಲೆ ನಡೆಸಿ, ಪರಾರಿಯಾಗಿದ್ದರು.

ಇದೀಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಣ ಕನ್ನಡ ಜಿಲ್ಲೆಯಾದ್ಯಂತ  ಮೇ. 27 ರ ಸಂಜೆ 6 ಗಂಟೆಯಿಂದ ಮೇ. 30 ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ.

Home add -Advt

ಇತ್ತೀಚೆಗಷ್ಟೆ ಅಂದರೆ ಮೇ 1ರಂದು 2022ರ ಮೊಹಮ್ಮದ್ ಫಾಜಿಲ್ ಕೊಲೆ ಪ್ರಕರಣದ ಆರೋಪಿ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ನಡೆದಿತ್ತು. ಇದಾಗಿ ಕೆಲ ದಿನಗಳಲ್ಲೇ ಮಂಗಳೂರಿನ ಕುಡುಪು ಕಟ್ಟೆ ಸಮೀಪ ಕ್ರಿಕೆಟ್ ಆಡುತ್ತಿದ್ದಾಗ ವಯನಾಡಿನ ಅಶ್ರಫ್ ಎಂಬಾತನನ್ನು ದುಷ್ಕರ್ಮಿಗಳ ತಂಡ ಕೊಲೆಗೈದಿತ್ತು. ಇದೀಗ ಎರಡು ಕೊಲೆ ಮಾಸುವ ಮುನ್ನವೇ ಮೂರನೇ ಕೊಲೆ ನಡೆದಿದೆ.

Related Articles

Back to top button