
ಪ್ರಗತಿವಾಹಿನಿ ಸುದ್ದಿ: ಪ್ರತಿಷ್ಠಿತ ಆಸ್ಪತ್ರೆಯ ಸ್ಟಾಫ್ ನರ್ಸ್ ಓರ್ವರ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಸ್ಟಾಫ್ ನರ್ಸ್ ಓರ್ವರ ಹತ್ಯೆಗೈದು ಪರಾರಿಯಾಗಿದ್ದಾನೆ. ಬೆಂಗಳುರಿನ ಕುಮಾರಸ್ವಾಮಿ ಲೇಔಟ್ ನ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಮಮತಾ (39) ಕೊಲೆಯಾದ ನರ್ಸ್. ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಮಮತಾ ತನ್ನ ಸ್ನೇಹಿತೆ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಡಿಸೆಂಬರ್ 24ರಂದು ಮಮತಾ ಸ್ನೇಹಿತೆ ಊರಿಗೆ ಹೋಗಿದ್ದಳು. ಅದಾದ ಬಳಿಕ ಮಮತಾ ಡ್ಯೂಟಿಗೆ ಬಂದಿರಲಿಲ್ಲ. ಇಂದು ಬೆಳಿಗ್ಗೆ ಮಮತಾ ಮನೆ ಬಳಿ ಆಸ್ಪತ್ರೆಯ ಸಿಬ್ಬಂದಿಗಳು ಹೋಗಿ ನೋಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.




