ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವೇಳೆ ಘೋರ ದುರಂತ
ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ.
ನಿನ್ನೆ ಸಮುದ್ರದಲ್ಲಿ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವ ಪತ್ತೆಯಾಗಿತ್ತು. ಆದರೆ ಮೂವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿದ್ದರು. ಇದೀಗ ಮೂರುವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದ್ದು, ಕರಾವಳಿ ಕಾವಲುಪಡೆ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
15 ವರ್ಷದ ದೀಕ್ಷಾ, ಲಾವಣ್ಯ, ವಂದನಾ ಮೃತದೇಹ ಪತ್ತೆಯಾಗಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೆಶ್ವರಕ್ಕೆ ಬಂದಿದ್ದರು. ಈ ವೇಳೆ ಸಮುದ್ರದ ತೀರದಲ್ಲಿ ಆಟವಾಡುವಾಗ ನಿನ್ನೆ ಸಂಜೆ ಅಲೆಗಳ ಅಬ್ಬರಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಅವರಲ್ಲಿ ಮೂವರು ವಿದ್ಯಾರ್ಥಿನಿಯರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದರು. ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಶವ ನಿನ್ನೆ ಪತ್ತೆಯಾಗಿತ್ತು. ಉಳಿದ ಮೂವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದರು. ಅವರಿಗಾಗಿ ನಿನ್ನೆಯಿಂದ ನಿರಂತರವಾಗಿ ಶೋಧಕಾರ್ಯ ನಡೆಸಲಾಗಿತ್ತು. ಇದೀಗ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ