Karnataka News

*ಮೊರಾರ್ಜಿ ದೇಸಾಯಿ ಶಾಲೆ ಪ್ರಾಂಶುಪಾಲೆ ಸಸ್ಪೆಂಡ್; ಶಿಕ್ಷಕರು, ಸಿಬ್ಬಂದಿ ವಜಾ*

ಪ್ರಗತಿವಾಹಿನಿ ಸುದ್ದಿ: ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಶೈಕ್ಷಣಿಕ ಪ್ರವಾಸಕ್ಕೆಂದು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಬಂದಿದ್ದ ವೇಳೆ ನಿನ್ನೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳಿಗೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳೆ.

ದೀಕ್ಷಾ, ಲಾವಣ್ಯ, ವಂದನಾ ಎಂಬ ಮೂವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಪ್ರಕರಣ ಸಂಬಂಧ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಿರ್ದೇಶಕ ಕಾಂತರಾಜು, ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಶಶಿಕಲಾ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಅತಿಥಿ ಶಿಕ್ಷಕರು ಹಾಗೂ ಡಿಗ್ರೂಪ್ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button