Politics

*ಮುರುಡೇಶ್ವರ ಸಮುದ್ರದಲ್ಲಿ ವಿದ್ಯಾರ್ಥಿನಿಯರ ಸಾವು ಕೇಸ್: ಸರ್ಕಾರದ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಘೋಷಿಸಿದ ಸಚಿವ ಬೈರತಿ ಸುರೇಶ್*

ಪ್ರಗತಿವಾಹಿನಿ ಸುದ್ದಿ: ಮುರುಡೇಶ್ವರದಲ್ಲಿ ಮುಳಬಾಗಲು ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Home add -Advt

ಈಗಾಗಲೇ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ಪರಿಹಾರ ಘೋಷಣೆ‌ ಮಾಡಿದ್ದು, ಅದರ ಜೊತೆಗೆ ಸಚಿವರಾದ ಬೈರತಿ ಸುರೇಶ ಕೂಡ ಮೃತ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.

ಮಡಿದ ವಿದ್ಯಾರ್ಥಿಗಳ ಕುಟುಂಬಕ್ಕೆ ಸಾಂತ್ವಾನದ ಜೊತೆಗೆ ೫ ಲಕ್ಷ ಪರಿಹಾರವನ್ನು ಸರ್ಕಾರ ಘೋಷಣೆ ಮಾಡುವುದರ ಜೊತೆಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ ಅವರು ವೈಯಕ್ತಿಕವಾಗಿ ತಲಾ ಐದು ಲಕ್ಷ ರೂಪಾಯಿಗಳನ್ನು ಮೃತ ಕುಟುಂಬದ ಸದಸ್ಯರಿಗೆ ನೀಡುವುದಾಗಿ ತಿಳಿಸಿದ್ದಾರೆ.

ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸಚಿವರು ಸೂಚನೆ‌ ನೀಡಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ರು 46 ಶಾಲಾ ವಿದ್ಯಾರ್ಥಿಗಳು, 6 ಶಿಕ್ಷಕರು ಸೇರಿದಂತೆ ಒಟ್ಟು 57 ಜನರು ಬಸ್‌ನಲ್ಲಿ ಪ್ರವಾಸಕ್ಕೆ ಬಂದಿದ್ರು. ನಿನ್ನೆ ಸಂಜೆ ವೇಳೆ ಮುರುಡೇಶ್ವರದ ಸಮುದ್ರ ನೀರಿನಲ್ಲಿ ಈಜುವಾಗ ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಳು. ಇನ್ನೂ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧಕಾರ್ಯ ನಡೆಸಲಾಗಿತ್ತು. ಇಂದು ಬೆಳಿಗ್ಗೆ ಮೂವರು ವಿದ್ಯಾರ್ಥಿನಿಯರ ಶವ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಶವಗಳನ್ನು ಕರಾವಳಿ ಕಾವಲು ಪಡೆ ಸಿಬ್ಬಂದಿ ಹೊರತೆಗೆದಿದ್ದಾರೆ.

Related Articles

Back to top button