Latest

*ಮುರುಡೇಶ್ವರದಲ್ಲಿ ದುರಂತ; ಸಮುದ್ರದ ಅಲೆಗಳಿಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ; ಮುರುಡೇಶ್ವರ: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಸರ್ಕಾರ, ಹವಾಮಾನ ಇಲಾಖೆಯ ಎಚ್ಚರಿಕೆ ನಡುವೆಯೂ ಸಮುದ್ರಕ್ಕೆ ಇಳಿದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.

ಪವನ್ ಮೃತ ಇಂಜಿನಿಯರಿಂಗ್ ವಿದ್ಯಾರ್ಥಿ. 6 ಮಂದಿ ಸ್ನೇಹಿತರೊಂದಿಗೆ ಪವನ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಿಂದ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದರು. ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಪವವ್ ಸೇರಿ ಮೂವರು ಸಮುದ್ರದಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ಬೃಹತ್ ಅಲೆಗಳ ಅಬ್ಬರದ ನಡುವೆ ಸಿಲುಕಿದ ಪವನ್ ಸಾವನ್ನಪ್ಪಿದ್ದಾರೆ.

ಅಲೆಗಳ ನಡುವೆ ಸಿಲುಕಿದ್ದ ಇನ್ನಿಬ್ಬರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button