
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬಾಡಿ ವಾರಂಟ್ ಜಾರಿಗೊಳಿಸಿದೆ.
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, 2009ರಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಕೋರ್ಟ್ ಬಾಡಿ ವಾರಂಟ್ ಹೊರಡಿಸಿದೆ.
ಫೆಬ್ರವರಿ 9ರಂದು ಶ್ರೀಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಅವರಿಗೆ ಸೂಚಿಸಿದೆ.
ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಪಿ.ಎಸ್ ಪ್ರಕಾಶ್ ಎಂಬುವವರು 2009ರಲ್ಲಿ ಮುರುಘಾಶ್ರೀ ವಿರುದ್ಧ ಪ್ರಕರಣ ದಾಖಲಿಸಿದ್ದರು. ಐಪಿಸಿ ಸೆಕ್ಷನ್ 420, 405, 406, 418 ಅಡಿ ಶ್ರೀಗಳ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘಾಶ್ರೀಗಳು ವಿಚಾರಣೆ ಕೋರ್ಟ್ ಗೆ ಹಾಜರಾಗದೇ ಗೈರಾದ ಹಿನ್ನೆಲೆಯಲ್ಲಿ ಇದೀಗ ಬಾಡಿ ವಾರಂಟ್ ಹೊರಡಿಸಲಾಗಿದೆ.
*ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ; ಶ್ವಾನದಳ, ಬಾಂಬ್ ಪತ್ತೆ ದಳದಿಂದ ಪರಿಶೀಲನೆ*
https://pragati.taskdun.com/bangalore-nps-schoolbomb-threat/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ