Karnataka News

*ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ: ಪತ್ನಿ, ಮಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಮಗಳನ್ನು ಹೆಚ್.ಎಸ್.ಆರ್.ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ತಂದೆ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ತಾಯಿ ಪಲ್ಲವಿ ಹಾಗೂ ತಂಗಿ ಕೃತಿ ಮೇಲೆ ಕೊಲೆ ಮಾಡಿರುವ ಶಂಕೆ ಇದೆ. ಈ ಬಗ್ಗೆ ತನಿಖೆ ನಡೆಸುವಂತೆ ಪುತ್ರ ಕಾರ್ತಿಕೇಶ್ ಬೆಂಗಳೂರಿನ ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ದೂರು ದಾಖಲಾಗಿದ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button