ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಮುರುಗೇಶ್ ನಿರಾಣಿ, ಪೊಲೀಸರ ತನಿಖೆಗೆ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪಕ್ಕೆ ತಮ್ಮ ವಿರುದ್ಧ ತನಿಖೆ ನಡೆಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಹಾಗಾಗಿ ತನಿಖೆಗೆ ನಾನು ಸಹಕರಿಸುತ್ತೇನೆ. ಆದರೆ ನಾನು ದೇವತೆಗಳನ್ನು ಅಪಮಾನ ಮಾಡಿಲ್ಲ, ಈ ಬಗ್ಗೆ ಕ್ಷಮೆಯಾಚಿಸುತ್ತೇನೆ ಎಂದರು.
ಹಿಂದೂ ಧರ್ಮ, ಆಚಾರ, ವಿಚಾರ ಸಂಪ್ರದಾಯ ಹಾಗೂ ದೇವತೆಗಳ ಬಗ್ಗೆ ನಾನು ಅಪಾರವಾದ ನಂಬಿಕೆ, ಗೌರವ ಇಟ್ಟುಕೊಂಡಿದ್ದೇನೆ ಇಟ್ಟುಕೊಂಡಿದ್ದೇನೆ. ಅಪಮಾನಮಾಡುವ ಕೆಲಸ ಮಾಡಿಲ್ಲ. ಇದು ಅಚಾತುರ್ಯದಿಂದ ಆದ ಪ್ರಮಾದ ಹೊರತು ಉದ್ದೇಶಪೂರ್ವಕವಾಗಿ ಅಲ್ಲ. ಯಾರೋ ವಾಟ್ಸಪ್ ಗ್ರೂಗೆ ಕಳುಹಿಸಿದ್ದ ಮೆಸೇಜ್ ನ್ನು ಫಾರ್ ವರ್ಡ್ ಮಾಡಿದ್ದಾರೆ. ಇದು ನನ್ನ ಗಮನಕ್ಕೆ ಬಂದಾಕ್ಷಣ ರಾಜ್ಯದ ಜನರ ಕ್ಷಮೆಯಾಚಿಸಿದ್ದೇನೆ. ಸಂದೇಶವನ್ನೂ ಡಿಲಿಟ್ ಮಾಡಲಾಗಿದೆ. ನಾನು ಸರ್ವಧರ್ಮ ಸಹಿಷ್ಣತೆಯನ್ನು ಗೌರವಿಸುತ್ತೇನೆ. ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ. ನ್ಯಾಯಾಲಯ ನೀಡುವ ಆದೇಶಕ್ಕೆ ಬದ್ಧ ಎಂದು ಕೋರ್ಟ್ ಗೆ ಕೂಡ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು.
ಮೊದಲ ಸಭೆಯಲ್ಲೇ ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಆದೇಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ