Latest

ಕುತೂಹಲ ಮೂಡಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿ ಗೆದರಿದ್ದು, ಇದೀಗ ಗಣಿ ಸಚಿವ ಮುರುಗೇಶ್ ನಿರಾಣಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಿನ್ನೆ ವಾರಣಾಸಿಯ ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದ ಸಚಿವ ನಿರಾಣಿ ಬೆಂಗಳೂರಿಗೆ ವಾಪಸ್ ಆಗಿದ್ದು, ಇಂದು ಸಿಎಂ ಯಡಿಯೂರಪ್ಪ ಭೇಟಿಯಾಗಿ ಚರ್ಚಿಸಿದ್ದಾರೆ.

Home add -Advt

ಸಿಎಂ ಅಧಿಕೃತ ಕಾವೇರಿ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
ಟ್ಯಾಂಕರ್- ಕಾರು ಮುಖಾಮುಖಿ ಡಿಕ್ಕಿ; ನಾಲ್ವರ ದುರ್ಮರಣ

Related Articles

Back to top button