Latest

ರಾಜ್ಯ ರಾಜಕೀಯದಲ್ಲಿ ಮಹತ್ವದ ವಿದ್ಯಮಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಗಣಿ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಳ್ಳಾರಿ ಪ್ರವಾಸ ರದ್ದು ಮಾಡಿ ಸಚಿವ ನಿರಾಣಿ ದೆಹಲಿಗೆ ಹೊರಟಿದ್ದಾರೆ. ನಿನ್ನೆ ಚಿತ್ರದುರ್ಗದ ಕಾರ್ಯಕ್ರಮದಲ್ಲಿ ಪಾಲ್ಗೊಂದಿದ್ದ ವೇಳೆ ದೆಹಲಿಗೆ ಬರುವಂತೆ ವರಿಷ್ಠರಿಂದ ಬುಲಾವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ಪ್ರಯಾಣಿಸಿದ್ದು, ವರಿಷ್ಠರ ಭೇಟಿ ಬಳಿಕ ರಾತ್ರಿಯೇ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.

ಸಚಿವ ನಿರಾಣಿಯವರಿಗೆ ವರಿಷ್ಠರು ಬುಲಾವ್ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗೆ ಕಾರಣವಾಗಲಿದೆಯೇ ಎಂಬ ಕುತೂಹಲ ಮೂಡಿದೆ.
ಚಿದಾನಂದ ಸವದಿ ಕಾರು ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಸಾವು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button