Latest

ದೆಹಲಿ ಭೇಟಿ ಬಗ್ಗೆ ಸಚಿವ ನಿರಾಣಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವ ಗಣಿ ಸಚಿವ ಮುರುಗೇಶ್ ನಿರಾಣಿ, ಸಂಜೆ ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ನಿರಾಕರಿಸಿರುವ ಸಚಿವರು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದಿದ್ದಾರೆ.

ದೆಹಲಿ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಚಿವರು, ಖಾಸಗಿ ಕೆಲಸದ ನಿಮಿತ್ತ ದೆಹಲಿಗೆ ಬಂದಿದ್ದೇನೆ ಹೊರತು ಯಾರನ್ನೂ ಭೇಟಿಯಾಗಲು ಬಂದಿಲ್ಲ. ವರಿಷ್ಠರನ್ನೂ ಭೇಟಿಯಾಗುತ್ತಿಲ್ಲ ಎಂದು ಹೇಳಿದರು.

Home add -Advt

ವರಿಷ್ಠರ ಬುಲಾವ್ ಹಿನ್ನೆಲೆಯಲ್ಲಿ ಬಳ್ಳಾರಿ ಭೇಟಿ ಕಾರ್ಯಕ್ರಮ ರದ್ದುಗೊಳಿಸಿ ಸಚಿವ ಮುರುಗೇಶ್ ನಿರಾಣಿ ಸಂಜೆ ವರಿಷ್ಠರ ಭೇಟಿಯಾಗಿ ರಾತ್ರಿಯೇ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ. ಕೇಂದ್ರ ಸಂಪುಟ ಪುನಾರಚನೆ, ರಾಜ್ಯದಲ್ಲಿನ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಚಿವ ನಿರಾಣಿ ಅವರಿಗೆ ವರಿಷ್ಠರು ಕರೆ ನಿಡಿರುವುದು ಕುತೂಹಲ ಮೂಡಿಸಿದೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ವಿದ್ಯಮಾನ

ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ

Related Articles

Back to top button