ಮಹೇಶ್ ಕುಮಟಳ್ಳಿ ಪರ ಮುರುಗೇಶ್ ನಿರಾಣಿ ಬ್ಯಾಟಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೆದ್ದ 11 ಶಾಸಕರಲ್ಲಿ ಮಹೇಶ್ ಕುಮಟಳ್ಳಿ ಕೈಬಿಡುವುದು ಸರಿಯಲ್ಲ. ಅವರಿಗೂ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಮಹೇಶ್ ಕುಮಟಳ್ಳಿ ಪರ ಮಾಜಿ ಸಚಿವ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಟಳ್ಳಿಗೆ ಸಚಿವ ಸ್ಥಾನ ನೀಡಬೇಕು. ಅವರು ಹಿರಿಯರಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ 50 ಕ್ಕೂ ಹೆಚ್ಚು ವರ್ಷ ರಾಜಕೀಯ ಅನುಭವವಿದೆ. ಅವರಿಗೆ ಸಲಹೆ ನೀಡುವಷ್ಟು ನಾನು ದೊಡ್ಡವನಲ್ಲ. ಆದರೆ 11 ಜನ ನೂತನ ಶಾಸಕರಲ್ಲಿ ಕುಮಟಳ್ಳಿ ಒಬ್ಬರನ್ನು ಕೈ ಬಿಟ್ಟರೆ ತಪ್ಪಾಗುತ್ತದೆ ಎಂಬುದು ನನ್ನ ಅಭಿಪ್ರಾಯ ಎಂದರು.

Home add -Advt

ಯಡಿಯೂರಪ್ಪನವರು ಎಲ್ಲವನ್ನೂ ಬಗೆಹರಿಸಿ ಕುಮಟಳ್ಳಿಯವರನ್ನು ಸಚಿವರನ್ನಾಗಿ ಮಾಡ್ತಾರೆ ಎನ್ನುವ ವಿಶ್ವಾಸವಿದೆ. ಇನ್ನು ನನಗೆ ಸಚಿವ ಸ್ಥಾನದ ಅವಕಾಶ ಕೊಟ್ಟರೆ ಯಶಸ್ವಿಯಾಗಿ ನಿರ್ವಹಿಸುತ್ತೇನೆ. ಇಲ್ಲವಾದಲ್ಲಿ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸ ಮುಂದುವರೆಸುತ್ತೇನೆ ಎಂದು ಹೇಳಿದರು.

ನನಗೆ ಮಂತ್ರಿ ಸ್ಥಾನ ನೀಡಬೇಕೆಂಬುದು ಜನತೆ ಒತ್ತಾಯ, ಶ್ರೀಗಳ ಒತ್ತಾಯ, ಸಮುದಾಯ ಒತ್ತಾಯವಿದೆ. ಆದರೆ ಸಿಎಂ ತೆಗೆದುಕೊಳ್ಲುವ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು.

Related Articles

Back to top button