ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ದೊರೆತಿದ್ದು, ಇದರ ಬೆನ್ನಲ್ಲೇ ಪಂಚಮಸಾಲಿ ಪಾದಯಾತ್ರೆ ರದ್ದುಗೊಳಿಸಲು ನಿರ್ಧರಿಸಲಾಗಿದೆ.
ಪಂಚಮಸಾಲಿ ಲಿಂಗಾಯಿತ 2ಎ ಮೀಸಲಾತಿಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಾಳೆ ಬಸವಕಲ್ಯಾಣದಿಂದ ಬೆಂಗಳೂರಿನವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗುತ್ತಿದ್ದಂತೆಯೇ ಪಾದಪಾತ್ರೆ ಕೈಬಿಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಮುರುಗೇಶ್ ನಿರಾಣಿ, ಸಚಿವ ಸ್ಥಾನದ ಪಟಿಯಲ್ಲಿ ನಮ್ಮ ಹೆಸರಿದೆ ಎಂದು ಗೊತ್ತಾಯಿತು. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಸಿಎಂ ಯಡಿಯೂರಪ್ಪನವರಿಗೆ ಧನ್ಯವಾದ ಅರ್ಪಿಸುತ್ತೇನೆ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದಿದ್ದಾರೆ.
ಇನ್ನು ಪಂಚಮಸಾಲಿ ಪಾದಯಾತ್ರೆ ಕೈಬಿಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಸ್ವಾಮೀಜಿ ಬಳಿ ನಾನು ಮಾತನಾಡಿದ್ದೇನೆ. ಸಿಎಂ ಬಿ.ಎಸ್.ವೈ ಕೂಡ ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದ್ದರು. ಹೀಗಾಗಿ ಪಾದಯಾತ್ರೆ ಹಿಂಪಡೆಯುವುದಾಗಿ ಸ್ವಾಮೀಜಿ ತಿಳಿಸಿದ್ದಾಗಿ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ