Belagavi NewsBelgaum NewsKannada NewsKarnataka NewsLatestUncategorized

*ಬಿಜೆಪಿಯ 20 ಕ್ಕೂ ಹೆಚ್ಚು ಯೋಜನೆಗಳನ್ನು ಕೈ ಬಿಟ್ಟಿದ್ದಾರೆ; ಇದು ಅಭಿವೃದ್ಧಿಗೆ ಪೂರಕವಾಗದ ಬಜೆಟ್ ಎಂದ ಮುರುಗೇಶ್ ನಿರಾಣಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಮುರುಗೇಶ್ ನಿರಾಣಿ, ಎಲ್ಲಾ ಕ್ಷೇತ್ರಗಳಲ್ಲೂ ಸುಳ್ಳು ಭರವಸೆ ಕೊಟ್ಟಿದ್ದಾರೆ. ಚುನಾವಣೆ ವೇಳೆ ಗ್ಯಾರಂಟಿ ಘೋಷಣೆ ಮಾಡುವಾಗ ಯಾವುದೆ ಷರತ್ತು ಹಾಕಿರಲಿಲ್ಲ. ಈಗ ಷರತ್ತು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಜೆಟ್ ನಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂಡಿರುವ 20 ಯೋಜನೆ ಕೈಬಿಟ್ಟಿದ್ದಾರೆ. ಇದು ಒಂದು ಸಮುದಾಯದ ಓಲೈಕೆ ಬಜೆಟ್ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Related Articles

Back to top button