LatestUncategorized

*ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರ ಆದೇಶ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಮುರುಘಾಮಠದ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಮಠದ ಟ್ರಸ್ಟ್, ಶಿಕ್ಷಣ ಸಂಸ್ಥೆ ಜವಾಬ್ದಾರಿ ನೋಡಿಕೊಳ್ಳುವವರಿಲ್ಲದೇ ಸಮಸ್ಯೆ ಎದುರಾಗಿದೆ.

Home add -Advt

ಈ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ.

ಮುರುಘಾ ಮಠದ ಟ್ರಸ್ಟ್, ಶಿಕ್ಷಣ ಸಂಸ್ಥೆ, ಲೆಕ್ಕಪತ್ರ ನಿರ್ವಹಣೆ, ಮಠದ ಚಿರ, ಸ್ಥಿರ ಆಸ್ತಿ ಹಿತದೃಷ್ಟಿ ಹಿನ್ನೆಲೆಯಲ್ಲಿ ಪಿ.ಎಸ್.ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ಮಾಡಲಾಗಿದ್ದು, ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.

*13 ವರ್ಷದ ಬಾಲಕಿ ಗರ್ಭಿಣಿ; ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ*

https://pragati.taskdun.com/hasana13-yers-girlgang-rape3-arrestedpocso-case/

 

*ಕಾಂಗ್ರೆಸ್ ನಲ್ಲಿ ಮಹಿಳಾ CM ಬೇಡಿಕೆ ಇಟ್ಟ ಪುಷ್ಪಾ ಅಮರನಾಥ್*

https://pragati.taskdun.com/congresslady-cmpushpa-amaranathhubli/

Related Articles

Back to top button