
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.
ಮುರುಘಾ ಮಠದ ವಸತಿ ಶಾಲೆಯ ಅಪ್ರಾಪ್ತ ಬಾಲಕಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪದಲ್ಲಿ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿ, ಶ್ರೀಗಳು ಜೈಲುಪಾಲಾಗಿದ್ದರು. ಜಾಮೀನು ಮೇಲೆ ಹೊರಗಿರುವ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ ನ ಮೊದಲ ಪ್ರಕರಣದಲ್ಲಿ ಇಂದು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಚಿತ್ರದುರ್ಗದ ಎರಡನೆ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಮುರುಘಾ ಶ್ರೀ ವಿರುದ್ಧದ ಮೊದಲ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ತೀರ್ಪು ನೀಡಿದೆ. ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ದೋಷಮುಕ್ತರಾಗಿದ್ದು, ಸ್ವಾಮೀಜಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ.

