Wanted Tailor2
Cancer Hospital 2
Bottom Add. 3

*BREAKING NEWS: ಮುರುಘಾ ಶ್ರೀ ಮತ್ತೆ ಬಂಧನ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ.

2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಚಿತ್ರದುರ್ಗ ಪ್ರವೇಶಕ್ಕೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ನಿರ್ಬಂಧ ಹೇರಿದ್ದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ವಿರಕ್ತಮಠದಲ್ಲಿ ಮುರುಘಾ ಶ್ರೀ ವಾಸ್ತವ್ಯ ಹೂಡಿದ್ದರು. ಅರೆಸ್ಟ್ ವಾರಂಟ್ ಪ್ರತಿ ಪಡೆದು ಮಠಕ್ಕೆ ಆಗಮಿಸಿದ ಚಿತ್ರದುರ್ಗ ಪೊಲೀಸರು ಮುರುಘಾ ಶ್ರೀಗಳನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಮೊದಲನೇ ಪೋಕ್ಸೋ ಕೇಸ್ ನಲ್ಲಿ ಇತ್ತೀಚೆಗೆ ಹೈಕೋರ್ಟ್ ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದರು.ಇದೀಗ ಎರಡನೇ ಪೋಕ್ಸೋ ಕೇಸ್ ನಲ್ಲಿ ಕೋರ್ಟ್ ನಿಂದ ಬಂಧನ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳನ್ನು ಮತ್ತೆ ಬಂಧಿಸಲಾಗಿದೆ.

Bottom Add3
Bottom Ad 2

You cannot copy content of this page