ಜಾಮೀನು ರದ್ದು
ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
4 ತಿಂಗಳ ಕಾಲ ಮುರುಘಾ ಶ್ರೀಗಳ ಜಾಮೀನು ರದ್ದು ಮಾಡಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ನ್ಯಾಯಾಂಗ ಬಂಧನಕ್ಕೆ ತೆರಳಬೇಕು ಎಂದು ಸೂಚಿಸಿದೆ.
ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣಗೊಳಿಸಿ ಚಾರ್ಜ್ ಶೀಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿದೆ. ಒಂದು ವೇಳೆ ನಾಲ್ಕು ವಾರಗಳಲ್ಲಿ ತನಿಖೆ ಪೂರ್ಣವಾಗದಿದ್ದರೆ ಕೋರ್ಟ್ ಗಮನಕ್ಕೆ ತರಬೇಕು. ಮತ್ತೆ 2 ವಾರ ನ್ಯಾಯಾಂಗ ಬಂಧನ ವಿಸ್ತರಿಸಬಹುದು ಎಂದು ತಿಳಿಸಿದೆ.
ಅಲ್ಲದೇ ಸಂತ್ರಸ್ತ ಮಕ್ಕಳನ್ನು ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಮುರುಘಾಮಠದ ವಸತಿ ಶಾಲೆಯಲ್ಲಿಯೇ ಇದ್ದ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಕೆಲ ದಿನಗಳ ಹಿಂದೆ ಮುರುಘಾ ಶ್ರೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಇದೀಗ ಸುಪ್ರೀಂ ಕೋರ್ಟ್ ಮುರುಘಾ ಶ್ರೀ ಬೇಲ್ ರದ್ದು ಮಾಡಿದ್ದು, ಮತ್ತೆ ಜೈಲಿಗೆ ತೆರಳಲು ಸೂಚಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ