
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳಿಗೆ ಹೈಕೋರ್ಟ್ ಒಂದು ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಮುರುಘಾ ಶ್ರೀಗಳಿಗೆ ಜೈಲಿನಿಂದ ಬಿಡುಗಡೆ ಭಾಗ್ಯವಿಲ್ಲ.
ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಸದ್ಯಕ್ಕೆ ಬಿಡುಗಡೆ ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.