
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುರುಘಾ ಶ್ರೀ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ಪೊಕ್ಸೋ ಪ್ರಕರಣದ ಮೂರನೇ ಆರೋಪಿಯಾಗಿರುವ ಮುರುಘಾ ಮಠದ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯಗೆ ಇಂದು ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ಈ ಹಿನ್ನೆಲೆಯಲ್ಲಿ ಆರೋಪಿ ಪರಮಶಿವಯ್ಯ ಅಕ್ಟೋಬರ್ 17ರಂದು ಚಿತ್ರದುರ್ಗದ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗು ಸಾಧ್ಯತೆ ಇದೆ.
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಮುರುಘಾ ಶ್ರೀಗಳು ಜೈಲು ಸೇರಿದ್ದಾರೆ. ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಪರಮಶಿವಯ್ಯನನ್ನು ಅಕ್ಟೋಬರ್ 28, 2022ರಲ್ಲಿ ಬಂಧಿಸಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ