Latest

*ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಶ್ರೀಗಳನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ ನೀಡಿದೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದೆ. ಈ ಹಿಂದೆ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಸಾಕ್ಷ್ಯ ವಿಚಾರಣೆ ನಡೆಸುವವರೆಗೂ ಮುರುಘಾಶ್ರೀಯನ್ನು ಬಂಧನದಲ್ಲಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಮತ್ತೆ ಜೈಲು ಸೇರಿದ್ದರು.

Home add -Advt

ಇದೀಗ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಬಿಡುಗಡೆ ಮಾಡುವಂತೆ ಕೋರ್ಟ್ ಸೂಚಿಸಿದೆ. ಸಂತ್ರಸ್ತೆಯರಿಬ್ಬರು ಸೇರಿ 12 ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡಿದೆ. ಮುರುಘಾಶ್ರೀ ಚಿತ್ರದುರ್ಗ ಜೈಲಿನಿಂದ ಬಿಡುಗಡೆ ಬಳಿಕ ದಾವಣಗೆರೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button