
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
1ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಜಾಮ್ಮೀನು ನೀಡಿದ ಹಿನ್ನೆಲೆಯಲ್ಲಿ ಬಿಡುಗಡೆ ಆದೇಶ ಪ್ರತಿ ನಿನ್ನೆ ಸಂಜೆ ಚಿತ್ರದುರ್ಗ ಜೈಲಧಿಕಾರಿಗಳ ಕೈ ಸೇರಿತ್ತು. ನಿನ್ನೆ ಸಮಯ ಮೀರಿದ್ದರಿಂದ ಶ್ರೀಗಳನ್ನು ಇಂದು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಎರಡನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳನ್ನು ಬಂಧಿಸಿರಲಿಲ್ಲ. ಬಾಡಿ ವಾರೆಂಟ್ ಆಧಾರದ ಮೇಲೆ ಶ್ರೀಗಳನ್ನು ವಿಚಾರಣೆ ನಡೆಸಲಾಗಿತ್ತು. ಬಾಡಿವಾರೆಂಟ್ ಆದೇಶದ ಮೇಲೆ ಜೈಲಿನಲ್ಲಿ ಇರಿಸಿಕೊಳ್ಳಲು ಅವಕಾಶವಿಲ್ಲ. ಹೀಗಾಗಿ ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀಗಳನ್ನು ಬಿಡುಗಡೆ ಮಾಡಲಾಗಿದೆ.
ಜಾಮೀನಿನ ವೇಳೆ ಹೈಕೋರ್ಟ್ 7 ಷರತ್ತುಗಳನ್ನು ಹಾಕಿದೆ ಅವುಗಳಲ್ಲಿ ಮುರುಘಾಶ್ರೀ ಚಿತ್ರದುರ್ಗ ಪ್ರವೇಶಿಸುವಂತಿಲ್ಲ ಎಂಬುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀಗಳು ಮುರುಘಾ ಮಠಕ್ಕೆ ತೆರಳದೇ ದಾವಣಗೆರೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ