Latest

ಮುರುಘಾಮಠದಲ್ಲಿ ಫೋಟೋ ಕಳುವು ಪ್ರಕರಣ; ಮಾಜಿ ಆಡಳಿತಾಧಿಕಾರಿ ಸೇರಿ ಇಬ್ಬರು ವಶಕ್ಕೆ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಚಿತ್ರದುರ್ಗದ ಮುರುಘಾಮಠದಲ್ಲಿ 47 ಫೋಟೋಗಳ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಆಡಳಿತಾಧಿಕಾರಿ ಸೇರಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.

ಫೋಟೋ ಕಳುವಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಹಾಗೂ ಶ್ರೀನಿವಾಸ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರನ್ನೂ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಫೋಟೋ ಕಳುವು ಪ್ರಕರಣ ಸಂಬಂಧ ನ.7ರಂದು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಅವರು ವಿಚಾರಣೆ ವೇಳೆ ಬಸವರಾಜನ್ ಹೆಸರು ಹೇಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಸವರಾಜನ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಪತ್ನಿ ಸೌಭಾಗ್ಯಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಪಾಲಕರಿಗೆ ಅರಿವಿರಲಿ; ಮಕ್ಕಳನ್ನು ಬೆಳೆಸುವ ರೀತಿ, ನೀತಿ

Home add -Advt

https://pragati.taskdun.com/article/parents-should-be-aware-child-rearing-style-ethics/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button