ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಮುರುಘಾಶ್ರೀ ಸೇರಿದಂತೆ ಐವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುರುಘಾಶ್ರೀಗಳು ನಿರೀಕ್ಷಣಾ ಜಾಮೀನಿನಾಗಾಗಿ ಕೋರ್ಟ್ ಮೊರೆ ಹೋಗಿರುವ ಬೆನ್ನಲ್ಲೇ ಮಾಜಿ ಶಾಸಕ ಹಾಗೂ ಅವರ ಪತ್ನಿ ಕೂಡ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ಮುರುಘಾಶ್ರೀಗಳ ವಿರುದ್ಧ ಮಠದ ಹಾಸ್ಟೇಲ್ ನಲ್ಲಿದ್ದ ಇಬ್ಬರು ಬಾಲಕಿಯರು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀಗಳು, ಹಾಸ್ಟೇಲ್ ವಾರ್ಡನ್ ರಶ್ಮಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣದ ಬೆನ್ನಲ್ಲೇ ಹಾಸ್ಟೇಲ್ ವಾರ್ಡನ್ ರಶ್ಮಿ ಮಠದ ಆಡಳಿತಾಧಿಕಾರಿ ಮಾಜಿ ಶಾಸಕ ಎಸ್.ಕೆ.ಬಸವರಾಜ್ ವಿರುದ್ಧ ಅತ್ಯಾಚಾರ ಯತ್ನ ಹಾಗೂ ಅವರ ಪತ್ನಿ , ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸೌಭಾಗ್ಯ ವಿರುದ್ಧ ಬ್ಲ್ಯಾಕ್ ಮೇಲ್ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾದಾಗಿನಿಂದ ನಾಪತ್ತೆಯಾಗಿರುವ ಮಾಜಿ ಶಾಸಕ ಹಾಗೂ ಪತ್ನಿ ಇದೀಗ ನಿರೀಕ್ಷಣಾ ಜಾಮೀನಿಗಾಗಿ ಚಿತ್ರದುರ್ಗ ಜಿಲ್ಲಾ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುರುಘಾಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ