
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಮುರಿಘಾಶ್ರೀ ಸೇರಿದಂತೆ ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ಹಾಗೂ ಎರಡನೇ ಆರೋಪಿ ವಾರ್ಡನ್ ರಶ್ಮಿಯನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದರು. ಪೊಲೀಸ್ ಕಸ್ಟಡಿಯಲ್ಲಿದ್ದ ರಶ್ಮಿಯನ್ನು ಇಂದು ಚಿತ್ರದುರ್ಗ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಈ ವೇಳೆ ಕೋರ್ಟ್ ಸೆ.14ರವರೆಗೆ ರಶ್ಮಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.
ಇನ್ನು ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಬಸವಾದಿತ್ಯ ಹಾಗೂ ಗಂಗಾಧರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಶಿಕ್ಷಕಿಗೆ ಕುಡಿತದ ಚಟ; ಮದ್ಯದ ಅಮಲಿನಲ್ಲಿಯೇ ವಿದ್ಯಾರ್ಥಿಗಳಿಗೆ ಪಾಠ; ಬೇಸತ್ತ ಗ್ರಾಮಸ್ಥರಿಂದ ಪ್ರತಿಭಟನೆ
https://pragati.taskdun.com/latest/tumakuruteacherdrinksalcoholschool/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ